ವಿಜಯಪುರ: ಹಾಡಹಾಗಲೇ ಕಣ್ಣಿಗೆ ಖಾರದಪುಡಿ ಎರಚಿ ಮೂವರು ದುಷ್ಕರ್ಮಿಗಳು ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ದರೋಡೆ ಮಾಡಿ ಪರಾರಿಯಾಗಿದ್ದಾರೆ.

ಗ್ರಾಮೀಣ ಕೋಟಕ್ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿನೋದ್ ಕುಮಾರ್ ಎಂಬುವವರು ಹಂಚನಾಳ, ಹಂಜಗಿ ಗ್ರಾಮದಲ್ಲಿ ಮಹಿಳಾ ಸ್ವಸಹಾಯ ಸಂಘದಿಂದ 1.5 ಲಕ್ಷ ಹಣ ಸಂಗ್ರಹಿಸಿ ತೆಗೆದುಕೊಂಡು ಹೋಗುತ್ತಿರುವಾಗ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ. ದರೋಡೆ ಮಾಡುವ ಸಂದರ್ಭದಲ್ಲಿ ವಿನೋದ್‍ಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ.ಗ್ರಾಮದಲ್ಲಿ ಹಣವನ್ನು ಸಂಗ್ರಹಿಸಿ ಬರುತ್ತಿದ್ದನ್ನು ಗಮನಿಸಿ ಬೈಕಿನಲ್ಲಿ ಹಿಂಬಾಲಿಸಿ ಬಂದ ಮೂವರು ಮುಸುಕುಧಾರಿಗಳು ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಹಲ್ಲೆ ಮಾಡಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.