ಬೈಕಿಗೆ ಇನ್ನೋವಾ ಕಾರು ಡಿಕ್ಕಿ – 40 ಅಡಿ ಫ್ಲೈಓವರ್ ರಸ್ತೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು

0
101

ಬೆಂಗಳೂರು: ಬೈಕಿಗೆ ಹಿಂಬದಿಯಿಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸುಮಾರು 40 ಅಡಿ ಎತ್ತರದ ಫ್ಲೈಓವರ್ ರಸ್ತೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ತುಮಕೂರು ಕಡೆ ಬರುತ್ತಿದ್ದ ವೇಗವಾಗಿ ಬಂದ ಇನ್ನೋವಾ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕಿನಲ್ಲಿದ್ದ ಆಂಧ್ರ ಮೂಲದ 25 ವರ್ಷದ ಸಂಜಯ್ ಕುಮಾರ್ ಫ್ಲೈಓವರ್ ರಸ್ತೆಯಿಂದ 40 ಅಡಿ ಕೆಳಗೆ ಬಿದ್ದ ಪರಿಣಾಮ ತಲೆಯ ಭಾಗಕ್ಕೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ನರಳಾಡಿ ಸಾವನ್ನಪ್ಪಿದ್ದಾನೆ.ಬೈಕಿನಲ್ಲಿ ಹಿಂಬದಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

LEAVE A REPLY

Please enter your comment!
Please enter your name here