ನಟಿ ಶಬಾನಾ ಅಜ್ಮಿ ಕಾರು ಅಪಘಾತ : ಆಸ್ಪತ್ರೆಗೆ ದಾಖಲು

0
91

ಮುಂಬೈ : ಮುಂಬೈ-ಪುಣೆ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಾಲಿವುಡ್ ನಟಿ ಶಬಾನಾ ಅಜ್ಮಿ ಅವರ ಕಾರು ಅಪಘಾತಕ್ಕೀಡಾಗಿ ಅವರು ಗಾಯಗೊಂಡಿರುವ ಘಟನೆ ನಡೆದಿದೆ.

ಮುಂಬೈನಿಂದ 60 ಕಿ.ಮೀ. ದೂರದಲ್ಲಿರುವ ಕಾಲಾಪುರ್ ಬಳಿ ಶನಿವಾರ ಶಬಾನಾ ಅವರು ಪ್ರಯಾಣಿಸುತ್ತಿದ್ದ ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಶಬಾನಾ ಅವರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಶಬಾನಾ ಅಜ್ಮಿ ಕಾರು ಅಪಘಾತಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಹಿರಿಯ ನಟಿ ಶಿಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here