ಕೋಲ್ಕತ್ತಾ: ಬಿಜೆಪಿ ವರಿಷ್ಠ ರೋಡ್ ಶೋ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಬಿಜೆಪಿಯ ಹಲವು ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿಯ ಬಿಜೆಪಿ ವಕ್ತಾರ ತಾಜಿಂದರ್ ಬಗ್ಗಾ ಅವರನ್ನು ಪೊಲೀಸರು ಮಧ್ಯರಾತ್ರಿ ವಶಕ್ಕೆ ಪಡೆದಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅಮಿತ್ ಶಾ, ಲೋಕಸಭೆಯ 6 ಹಂತಗಳ ಚುನಾವಣೆಯಲ್ಲಿ ಯಾವ ರಾಜ್ಯದಲ್ಲಿ ಹಿಂಸಾಚಾರ ನಡೆದಿಲ್ಲ. ಪಶ್ಚಿಮ ಬಂಗಾಳದಲ್ಲಿ ಮಾತ್ರ ಹಿಂಸಾಚಾರ ನಡೆಯುತ್ತಿದೆ. ಟಿಎಂಸಿಯ ಕುಮ್ಮಕ್ಕಿನಿಂದಲೇ ಹಿಂಸಾಚಾರ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಒಂದು ವೇಳೆ ನನ್ನ ರೋಡ್ ಶೋ ನಡೆಯುವಾಗ ಸಿಆರ್​ಪಿಎಫ್​ ಯೋಧರು ಸ್ಥಳದಲ್ಲಿ ಇಲ್ಲದೇ ಇದ್ದರೆ ನಾನು ಅಲ್ಲಿಂದ ಬರುವುದೇ ಕಷ್ಟವಾಗುತಿತ್ತು. ಟಿಎಂಸಿಯ ಗೂಂಡಾಗಳು ಏನು ಬೇಕಾದರೂ ಮಾಡುವ ಸಾಧ್ಯತೆ ಇತ್ತು. ಆದರೆ ಅದೃಷ್ಟ ನನ್ನ ಜೊತೆ ಇದ್ದ ಕಾರಣ ನಾನು ಸ್ಥಳದಿಂದ ಪಾರಾದೆ ಎಂದು ತಿಳಿಸಿದ್ದಾರೆ.

ಪೊಲೀಸರು ಮಧ್ಯಪ್ರವೇಶಿಸಿ ಲಾಠಿ ಬೀಸಿದ್ದಾರೆ. ಈ ಹಿಂಸಾಚಾರಕ್ಕೆ ಪ್ರತಿಕ್ರಿಯಿಸಿದ ಅಮಿತ್ ಶಾ, ಮಮತಾ ಬ್ಯಾನರ್ಜಿ ಅವರ ಕಾಯಕರ್ತರು ನನ್ನ ಮೇಲೆ ದಾಳಿ ನಡೆಸಲು ಮುಂದಾಗಿದ್ದರು. ರೋಡ್ ಶೋ ನಡೆಸಿ ಹಿಂಸಾಚಾರ ಮಾಡಲು ಟಿಎಂಸಿ ಪ್ಲಾನ್ ಮಾಡಿಕೊಂಡಿತ್ತು. ಪೊಲೀಸರು ಮೌನ ಪ್ರೇಕ್ಷಕರಾಗಿದ್ದರು ಎಂದು ದೂರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.