ಉಡುಪಿ:ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆಧಾರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತು ಮಾಡಲಾಗಿದೆ.

ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ವಿರುದ್ಧ ಪಕ್ಷೇತರವಾಗಿ ಕಣಕ್ಕಿಳಿದು ಪಕ್ಷಕ್ಕೆ ಸೆಡ್ಡು ಹೊಡೆದಿದ್ದಾರೆಂಬ ಕಾರಣ ನೀಡಿ ಉದ್ಯಮಿ ಅಮೃತ್ ಶಣೈ ಅವರನ್ನು ಅಮಾನತುಗೊಳಿಸಿರುವುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.

ಆದರೆ ಉದ್ಯಮಿ, ಸಾಮಾಜಿಕ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಂಡಿರುವ ಶಣೈ “ತಮಗೆ ಗೆಲ್ಲುವ ವಿಶ್ವಾಸವಿದೆ, ಕ್ಷೇತ್ರದ ಜನತೆ ಬುದ್ದಿವಂತರಿದ್ದಾರೆ.” ಎಂದು ಆಶಾಭಾವ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.