ಬೆಂಗಳೂರು: ಭಾವನಾತ್ಮಕವಾಗಿ ಅಳುವ ಮೂಲಕ ಅನುಕಂಪ ಗಿಟ್ಟಿಸುವ ಕೆಲಸವನ್ನು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಸಿಟ್ಟು ತೋಡಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮನೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ರಾಜಕೀಯ ಮಾಡುವುದನ್ನು ಬಿಡಬೇಕು. ಯಾವುದೇ ಪಕ್ಷವನ್ನು ದೂಷಿಸುವ ಕೆಲಸ ಮಾಡಬಾರದು. ಅವರು ನಡೆದುಕೊಂಡು ಬಂದಿರುವ ರೀತಿ, ಕಾನೂನು ಉಲ್ಲಂಘನೆ, ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿರುವುದು ಇಡೀ ಸಮಾಜಕ್ಕೆ ಗೊತ್ತಿದೆ. ಕಾನೂನಿನ ರೀತಿ ಏನಾಗಬೇಕೋ ಅದು ಆಗುತ್ತದೆ.ಕಾನೂನಿನ ಚೌಕಟ್ಟಿನಲ್ಲಿ ಅವರು ಮಾಡಿರುವ ಕೆಲಸ ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಪರಿಶೀಲಿಸಬೇಕು. ಅದನ್ನು ಇಡಿ ಅಧಿಕಾರಿಗಳು ಮಾಡುತ್ತಿದ್ದಾರೆ. ಅವರು ಮಾಡಿರುವ ಕರ್ಮಗಳಿಗೆ ಎಲ್ಲವೂ ಕಾಂಪ್ರಮೈಸ್ ಆದಲ್ಲಿ ಜನ ಎಲ್ಲಿಗೆ ಹೋಗಬೇಕು. ರಾಜಕಾರಣಿಗಳನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದಾರೆ, ಉದ್ಯಮಿಗಳ ವಿರುದ್ಧ ತನಿಖೆ ಮಾಡುತ್ತಿಲ್ಲ ಎಂಬ ಆರೋಪದ ಕುರಿತು ಉತ್ತರಿಸಿದ ಅವರು, ಹಾಗಾದರೆ ನೀವು ರಾಜಕೀಯ ಯಾಕೆ ಮಾಡುತ್ತೀರಾ, ನೀವು ವ್ಯಾಪಾರಿಗಳಾಗಿರಿ ಎಂದು ತಿರುಗೇಟು ನೀಡಿದರು.

ಈಗ ಅತ್ತು ಕರೆದು ಮಾಡಿದರೆ, ಏನೂ ಪ್ರಯೋಜನ ಕಾನೂನಿನ ಅಡಿಯಲ್ಲಿ ಏನಾಗಬೇಕೋ ಅದು ಆಗುತ್ತಿದೆ. ಯಾರೇ ಆದರೂ ಸರಿ ಉಪ್ಪು ತಿಂದರೆ ನೀರು ಕುಡಿಯಲೇಬೇಕು,ಇವರ ಭ್ರಷ್ಟಾಚಾರ, ಇಡೀ ಸಮಾಜಕ್ಕೆ ಗೊತ್ತಿದೆ. ಅದನ್ನು ನನ್ನ ಬಾಯಲ್ಲಿ ಯಾಕೆ ಹೇಳಿಸುತ್ತೀರಾ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.