ಬ್ಯಾಡ್ಮಿಂಟನ್: ಪಿ.ವಿ ಸಿಂಧೂ ವಿಶ್ವ ಚಾಂಪಿಯನ್

133

ಬಾಸೆಲ್‌: ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ.
ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ 21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ.

ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. 24ರ ಹರೆಯದ ಹೈದರಾಬಾದ್‌ ಆಟಗಾರ್ತಿ 2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್‌ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ 2017ರ ಫೈನಲ್‌ನಲ್ಲಿ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.