ಬೀದರ್ ಶಾಹಿನ್ ವಿದ್ಯಾಸಂಸ್ಥೆ ಪ್ರಕರಣ: ಶಿಕ್ಷಕಿ ಮತ್ತು ವಿದ್ಯಾರ್ಥಿನೀಯ ತಾಯಿಗೆ ಜಾಮೀನು ಮಂಜೂರು

0
54

ಬೀದರ್: ಶಾಹಿನ್ ವಿದ್ಯಾಸಂಸ್ಥೆಯಲ್ಲಿ ನಡೆಸಿದ ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ನಡೆದ ನಾಟಕಕ್ಕೆ ಸಂಬಂಧಿಸಿದಂತೆ ದೇಶದ್ರೋಹ ಪ್ರಕರಣ ದಾಖಲಿಸಿ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ವಿದ್ಯಾರ್ಥಿನೀಯ ತಾಯಿಯನ್ನು ಬಂಧಿಸಲಾಗಿತ್ತು. ಇದೀಗ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಬೀದರ್ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಕ್ಕೆ ಮತ್ತು ಶಿಕ್ಷಕಿ ಹಾಗೂ ತಾಯಿಯನ್ನು ಬಂಧಿಸಿದ್ದಕ್ಕೆ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿತ್ತು.

ಇದೀಗ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.‌ಉಳಿದಂತೆ ಐದು ಮಂದಿ ಆಡಳಿತ ಮಂಡಳಿ ಸದಸ್ಯರ ನಿರೀಕ್ಷಿತ ಜಾಮೀನು ಅರ್ಜಿ ವಿಚಾರಣೆ ಫೆ.17 ಕ್ಕೆ ನಡೆಯಲಿದೆ.

LEAVE A REPLY

Please enter your comment!
Please enter your name here