ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಗೋರಖ್ ಪುರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ, ಫುಲ್ ಪುರದಲ್ಲಿ ಸಮಾಜವಾದಿ ಪಕ್ಷ ಮುನ್ನಡೆ ಸಾಧಿಸಿದೆ. ಗೋರಖ್ ಪುರ ಕ್ಷೇತ್ರದಿಂದ ಚುನಾಯಿತರಾದ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ ಮೇಲೆ ಅವರ ಸ್ಥಾನಕ್ಕಾಗಿ ಈ ಉಪ ಚುನಾವಣೆ ನಡೆಯುತ್ತಿದೆ.

ಅದರೊಂದಿಗೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಕೇಶವ್ ಪ್ರಸಾದ್ ಮೌರ್ಯ ಅವರ ಸ್ಥಾನಕ್ಕೆ ಫುಲ್ ಪುರದಲ್ಲಿ ಚುನಾವಣೆ ನಡೆಯುತ್ತಿದೆ.

ಬಿಹಾರ ಉಪ ಚುನಾವಣೆ ಬಿಜೆಪಿ ಮುನ್ನಡೆ:

ಬಿಹಾರದಲ್ಲಿ ತೆರವುಗೊಂಡಿರುವ ಅರರಿಯಾ ಮತ್ತು ಬಾಬುಅ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಎರಡು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಪ್ರದೀಪ್ ಕುಮಾರ್ ಸಿಂಗ್ ಮತ್ತು ರಿಂಕಿ ರಾನಿ ಪಾಂಡೆ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.