ಕಾರು, ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, 4 ಮಂದಿಗೆ ಗಾಯ

1816

ಚಿತ್ರದುರ್ಗ: ಇಂಡಿಕಾ ಕಾರು ಮತ್ತು ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿದೆ.ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದಿದೆ.

ಈ ಘಟನೆ ತಡರಾತ್ರಿ ನಡೆದಿದ್ದು, ವೇಗವಾಗಿ ಬಂದ ಕಾರು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ರಾಯಚೂರು ಜಿಲ್ಲೆ ಲಿಂಗಸುಗೂರು ಮೂಲದ ಕಾರು ಚಾಲಕ ಹನುಮಂತಪ್ಪ (29) ಸಾವನ್ನಪ್ಪಿದ್ದಾರೆ.ಹಾಗೂ ನಾಲ್ವರು ಗಾಯಗೊಂಡಿದ್ದಾರೆ.ಗಾಯಗೊಂಡವರನ್ನು ಕೂಡಲೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಆನಂದ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.