ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ತೀರ್ಪನ್ನು ಶಾಸಕನಾಗಿ ಸ್ವಾಗತಿಸುತ್ತೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ತೀರ್ಪು ಹೊರ ಬಿದ್ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಅದನ್ನು ನಾನು ಸಚಿವ ಅಲ್ಲ ಓರ್ವ ಶಾಸಕನಾಗಿ ಗೌರವಿಸುತ್ತೇನೆ. ನ್ಯಾಯಾಲಯ ಸ್ಪೀಕರ್ ಅಧಿಕಾರ ಏನು ಎನ್ನುವುದನ್ನು ಎತ್ತಿ ಹಿಡಿದಿದೆ ಎಂದರು. ಶಾಸಕರು ಕಲಾಪಕ್ಕೆ ಹೋಗಬಹುದು ಬಿಡಬಹುದು. ಆದರೆ, ಪಕ್ಷದ ಕೈಯಲ್ಲಿ ವಿಪ್ ಇದೆಯಲ್ಲ. ಅನರ್ಹತೆಯೇ ಬೇರೆಯ ಕಾನೂನಾಗಿದ್ದು, ನಾನು ನನ್ನ ಶಾಸಕರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಬೇರೆಯವರನ್ನು ನಂಬಿ ಹೋಗಬೇಡಿ. ನಿಮ್ಮ ಮೇಲೆ ಮಂಗನ ಟೋಪಿ ಹಾಕುತ್ತಾರೆ. ಅನರ್ಹತೆ ಅನ್ನೋದು ಒಂದು ಇದೆ ಅಲ್ವಾ. ಅನರ್ಹ ಆದರೆ ನೀವು ಮತ್ತೆ ಮಂತ್ರಿ ಆಗಲು ಸಾಧ್ಯವಿಲ್ಲ. ಹೀಗಾಗಿ ನಿಮ್ಮನ್ನು ಗೆಲ್ಲಿಸಿರುವ ಜನರ ಮುಖ, ನಿಮ್ಮ ಕುಟುಂಬದವರ ಮುಖ ನೋಡಿ ನೀವು ಅನರ್ಹತೆಯ ಅಸ್ತ್ರಕ್ಕೆ ಬಲಿಯಾಗಬೇಡಿ. ವಿಶ್ವಾಸ ಮತದ ಬಗ್ಗೆ ನಾಳೆ ಮಾತನಾಡೋಣ ಎಂದು ಶಾಸಕರಿಗೆ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಗುರುವಾರ ವಿಶ್ವಾಸಮತಯಾಚನೆ ಮಾಡಬಹುದು. ರಾಜೀನಾಮೆ ನೀಡಿರುವ 15 ಶಾಸಕರು ಕಲಾಪಕ್ಕೆ ಭಾಗವಹಿಸುವುದು ಕಡ್ಡಾಯವಲ್ಲ. ಹಾಜರಾಗಬೇಕೋ ಬೇಡವೋ ಎನ್ನುವುದು ಶಾಸಕರ ವಿವೇಚನೆಗೆ ಬಿಟ್ಟ ವಿಚಾರ. ಅತೃಪ್ತ ಶಾಸಕರನ್ನು ಒತ್ತಾಯಪೂರ್ವಕವಾಗಿ ಕರೆತರುವ ಹಾಗಿಲ್ಲ ಎಂದು ಸುಪ್ರೀಂ ಮಧ್ಯಂತರ ಆದೇಶವನ್ನು ಪ್ರಕಟಿಸುವ ಮೂಲಕ ಅತೃಪ್ತರಿಗೆ ಬಿಗ್ ರಿಲೀಫ್ ನೀಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.