ದಾವಣಗೆರೆ ‌: ದಾವಣಗೆರೆ ಜಿಲ್ಲೆ ಮಾಯಕೊಂಡ ತಾಲ್ಲೂಕು ರಚನೆಗೆ ಕಂದಾಯ ಇಲಾಖೆಯಿಂದ ವರದಿ ತರಿಸಿಕಕೊಂಡು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ದಾವಣಗೆರೆ ಜಿಲ್ಲೆ ಮಾಯಕೊಂಡ ಕ್ಷೇತ್ರದ ಅಭಿವೃದ್ಧಿ ಕುರಿತಂತೆ ತಮ್ಮನ್ನು ಭೇಟಿಯಾದ ನಿಯೋಗದೊಂದಿಗೆ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸುತ್ತಾ ಮಾಯಕೊಂಡ ತಾಲ್ಲೂಕು ರಚನೆ ಕುರಿತು ತಿಳಿಸಿದರು.

ಹುಂಡೇಕಾರ್ ಸಮಿತಿ, ಗದ್ದಿಗೌಡರ ಸಮಿತಿ ಹಾಗೂ ವಾಸುದೇವರಾವ್ ಸಮಿತಿ ವರದಿಗಳಲ್ಲಿ ಮಾಯಕೊಂಡ ತಾಲ್ಲೂಕು ರಚನೆಗೆ ಶಿಫಾರಸು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಕೊಂಡ ತಾಲ್ಲೂಕು ರಚನೆಗೆ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಕಂದಾಯ ಇಲಾಖೆಗೆ ಸೂಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಮಾಯಕೊಂಡ ಶಾಸಕ ಪ್ರೊ. ಲಿಂಗಣ್ಣ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮೊದಲಾದವರು ನಿಯೋಗದಲ್ಲಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.