ಬೆಂಗಳೂರು : ನೆರೆ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಕೇವಲ 1200 ಕೋಟಿ ಬಿಡುಗಡೆ ಮಾಡಿದೆ. ಅಲ್ಲದೆ, ವಿಪಕ್ಷ ಶಾಸಕರ ಕ್ಷೇತ್ರಗಳ ಅನುದಾನ ರದ್ದು ಮಾಡಲಾಗಿದೆ ಇದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಹೇಯ ಕೃತ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕಿಡಿಕಾರಿದ್ದಾರೆ.

ಉತ್ತರ ಕರ್ನಾಟಕದ ನೇರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ನಿರ್ಲಕ್ಷ್ಯ ಮನೋಭಾವ ತೋರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ. ದೇವೇಗೌಡ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವವ ಅವರು “ನೆರೆಯಿಂದಾಗಿ ರಾಜ್ಯದಲ್ಲಿ ಸುಮಾರು 36 ಸಾವಿರ ಕೋಟಿ ನಷ್ಟ ಉಂಟಾಗಿದೆ. ಆದರೆ, ಕೇಂದ್ರ ಸರ್ಕಾರ ಕೇವಲ 1200 ಕೋಟಿ ಮಾತ್ರ ಪರಿಹಾರ ನೀಡಿದೆ. ಇದು ನೆರೆ ಸಂತ್ರಸ್ತರಿಗೆ ಕೇಂದ್ರ ಎಸಗುತ್ತಿರುವ ಅನ್ಯಾಯ ಅಲ್ಲದೆ ಬೇರೇನು? ಅಲ್ಲದೆ, ರಾಜ್ಯ ಬಿಜೆಪಿ ಸರ್ಕಾರ ವಿಪಕ್ಷ ಶಾಸಕರ ಕ್ಷೇತ್ರದ ಅನುದಾನವನ್ನೂ ರದ್ದು ಮಾಡಿದೆ. ಇದರಿಂದ ಕ್ಷೇತ್ರಗಳ ಅಭಿವೃದ್ಧಿ ಕುಂಠಿತವಾಗಿದೆ. ಎಂದು ಅವರು ಕಿಡಿಕಾರಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.