ನಾಲ್ಕು ವರ್ಷದ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ : ನಗರಸಭೆ ಎದುರು ಸಾರ್ವಜನಿಕರ ಆಕ್ರೋಶ

39

ಚಿತ್ರದುರ್ಗ: ನಾಲ್ಕು ವರ್ಷದ ಪುಟ್ಟ ಕಂದನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಬಾಲಕಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಚಿತ್ರದುರ್ಗದ ಆಜಾದ್ ನಗರದಲ್ಲಿ ನಡೆದಿದೆ.

ಬೀದಿ ನಾಯಿಗಳು ಗೌಸಿಯಾ(4) ಎಂಬ ಮಗುವಿಗೆ ವಿಪರೀತ ಕಚ್ಚಿದೆ. ಈ ಪರಿಣಾಮವಾಗಿ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.ಚಿಕಿಸ್ತೆಗಾಗಿ ದಾವಣಗೆರೆ ಆಸ್ಪತ್ರೆಗೆ ಸೇರಿಸಲಾಗಿದೆ. ಚಿತ್ರದುರ್ಗ ನಗರದಲ್ಲಿ ಈಗ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಅಮಾಯಕ ಮಕ್ಕಳು ಬಲಿಯಾಗುತ್ತಿದ್ದಾರೆ.ಸಾರ್ವಜನಿಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು ಕೂಡಲೇ ನಗರಸಭೆ ಅಧಿಕಾರಿಗಳು ಬೀದಿ ನಾಯಿಗಳನ್ನು ನಿಯಂತ್ರಣ ಮಾಡಬೇಕು ಎಂದು ಕೋರಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.