ವಾರಣಾಸಿ : ನರೇಂದ್ರ ಮೋದಿಯವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಾಗಿದ್ದ ಈಗ ಬಿಎಸ್ಬಿ ಪಕ್ಷದ ಅಭ್ಯರ್ಥಿಯಾಗಿ ವಾರಣಾಸಿ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲು ಸಿದ್ದರಾಗಿದ್ದ ಮಾಜಿ ಸೈನಿಕ ತೇಜ್ ಬಹದ್ದೂರ್ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ಕಳಿಸಲಾಗಿದೆ ಎಂದು ತಿಳಿದುಬಂದಿದೆ.

ತೇಜ್ ಬಹದ್ದೂರ್ ಸಲ್ಲಿಸಿರುವ ಚುನಾವಣಾ ನಾಮಪತ್ರದಲ್ಲಿ ಸಾಕಷ್ಟು ವಿಷಯಗಳ ಕುರಿತು ಮಾಹಿತಿ ನೀಡದೆ ಇರುವುದನ್ನು ಪ್ರಶ್ನಿಸಿ ನೋಟಿಸ್ ಜಾರಿಮಾಡಿದೆ ಎಂದು ತಿಳಿದುಬಂದಿದೆ.

ತೇಜ್ ಬಹದ್ದೂರ್ ಅವರು ಬಿಎಸ್‌ಎಫ್ ಸೇವೆಯಿಂದ ವಜಾಗೊಂಡಿದ್ದಾರೆ. ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹದಡಿ ಸೇವೆಯಿಂದ ವಜಾಗೊಂಡ ವ್ಯಕ್ತಿ ಐದು ವರ್ಷ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ, ಹಾಗಾಗಿ ಸೇವೆಯಿಂದ ವಜಾಗೊಂಡಿರುವ ತೇಜ್‌ಬಹದ್ದೂರ್ ಅವರು ಬಿಎಸ್‌ಎಫ್‌ನಿಂದ ನಿರಪೇಕ್ಷಣಾ ಪತ್ರ ತರುವಂತೆ ಆಯೋಗ ಸೂಚಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.