ಕಲಬುರ್ಗಿ: ಈಶಾನ್ಯ ಪದವೀಧರ ಕ್ಷೇತ್ರ ಬಿಜೆಪಿ ಭದ್ರ ಕೋಟೆಯಾಗಿತ್ತು. ಈ ಹಿಂದಿನ ಅನೇಕ ಚುನಾವಣೆಯಲ್ಲಿ ಬಿಜೆಪಿಗೆ ನಿರಾಯಾಸವಾಗಿ ಗೆಲುವು ಒಲಿದಿತ್ತು. ಆದರೆ ಈಗ ಭದ್ರ ಕೋಟೆ ಕೈ ವಶವಾಗಿದೆ.

ತೀವ್ರ ಕುತೂಹಲ ಕೆರಳಿಸಿದ್ದ ಈಶಾನ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಕಾರ್ಯಬುಧವಾರ ಬೆಳಿಗ್ಗೆ 4ಗಂಟೆಗೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಚ್ಚರಿಯ ಗೆಲುವು ಸಾಧಿಸಿದೆ.
ಬೀದರ್ ಜಿಲ್ಲೆ ಹುಮನಾಬಾದ್ನ ಕಾಂಗ್ರೆಸ್ ಅಭ್ಯರ್ಥಿ, ವೃತ್ತಿಯಿಂದ ವೈದ್ಯರಾಗಿರುವ ಡಾ. ಚಂದ್ರಶೇಖರ ಪಾಟೀಲ ಅವರು 321 ಮತಗಳ ಅಂತರದಿಂದ, ಬಿಜೆಪಿ ಅಭ್ಯರ್ಥಿ ಕೆ.ಬಿ.ಶ್ರೀನಿವಾಸ್ ಪರ ಗೆಲುವಿನ ನಗೆ ಬೀರಿದರು.

ಮಂಗಳವಾರ ಬೆಳಿಗ್ಗೆ 8ಗಂಟೆಗೆ ಅಂಚೆ ಮತಪತ್ರಗಳ ಎಣಿಕೆ ನಡೆಯಿತು. ಡಾ.ಚಂದ್ರಶೇಖರ ಪಾಟೀಲ ಅವರು 18,768 ಮತಗಳನ್ನು ಪಡೆದರು. ಬಿಜೆಪಿ ಅಭ್ಯರ್ಥಿ ಕೆ.ಬಿ. ಶ್ರೀನಿವಾಸ್ 18,447 ಮತಗಳನ್ನು ಪಡೆದು ಎರಡನೇ ಸ್ಥಾನ ಹಾಗೂ

ಜೆಡಿಎಸ್ನ ಪ್ರತಾಪ್ ರೆಡ್ಡಿ 13,311 ಮತಗಳನ್ನು ಪಡೆದು ತೃತೀಯ ಮೂರನೇ ಸ್ಥಾನ ಪಡೆದರು. ಮೊದಲ ಸುತ್ತಿನಿಂದ ಮೂರನೇ ಸ್ಥಾನದಲ್ಲಿದ್ದ ಕಾಂಗ್ರೆಸ್ಗೆ ಎರಡನೇ ಪ್ರಾಶಸ್ತ್ಯದ ಮತಗಳು ಗೆಲುವಿನ ದಡ ಸೇರಿಸಿದವು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.