ಲಖನೌ : 2019 ರ ಲೋಕಸಭೆ ಚುನಾವಣೆ ಬಿಸಿ ಏರುತ್ತಿದಂತೆ ಇದೀಗ ನರೇಂದ್ರ ಮೋದಿ ಸ್ವಕ್ಷೇತ್ರದಲ್ಲಿ ಎರಡು ಗ್ರಾಮಗಳ ಜನ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದು ನರೇಂದ್ರ ಮೋದಿಯವರಿಗೆ ಬಿಗ್ ಶಾಕ್ ನೀಡಿದ್ದಾರೆ.

2014 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ಎರಡು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದು, ಉತ್ತರ ಪ್ರದೇಶದ ವಾರಣಾಸಿಯಲ್ಲಿ ಮೋದಿಯೇ ಸಂಸದರಾದ ಮೇಲೆ ಕ್ಷೇತ್ರದ ಅಭಿವೃದ್ಧಿ ಆಕಾಶದೆತ್ತರಕ್ಕೆ ಏರುತ್ತೆ ಅಂತ ಅಲ್ಲಿನ ಜನ ಭಾವಿಸಿದ್ದರು. ಆದರೆ, ಇದೀಗ ನಮಗೇನೂ ಅಭಿವೃದ್ಧಿಯೇ ಆಗಿಲ್ಲ ಎಂದು ಈ ಬಾರಿಯ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಮೋದಿ ಅವರು ಈ ಬಾರಿಯೂ ವಾರಣಾಸಿಯಿಂದಲೇ ಸ್ಪರ್ಧಿಸುತ್ತಿದ್ದು, ಗಂಗಾಪುರ ಹಾಗೂ ಶಿವದಶಾ ಗ್ರಾಮಗಳ ಜನ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.