ಕೊಲ್ಲಾಪುರ: ಮಹಾರಾಷ್ಟ್ರದ ಸತಾರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ 6 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳ್ಳಂಬೆಳಿಗ್ಗೆ ಮಹಾರಾಷ್ಟ್ರದ ಸತಾರಾ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಮುಂಬೈನಿಂದ ಬೆಳಗಾವಿಗೆ ಬರುತ್ತಿದ್ದ ಎಸ್‍ಆರ್‍ಎಸ್ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ಮುಂದೆ ಸಾಗುತ್ತಿದ್ದ ಲಾರಿಯ ಹಿಂಭಾಗಕ್ಕೆ ವೇಗವಾಗಿ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ. ಹಾಗೂ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿಸ್ತೆ ಕೊಡಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.