ಮೈಸೂರು :ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ನೀತಿ ಸಂಹಿತೆಯಿಂದ ನಾಡಹಬ್ಬ ದಸರಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಸ್ಪಷ್ಟಪಡಿಸಿದ್ದಾರೆ.

ನಾಡಹಬ್ಬ ದಸರಾ ಮಹೋತ್ಸವ ನಡೆಯುತ್ತಿರುವುದರಿಂದ ನೀತಿ ಸಂಹಿತೆಯಿಂದ ವಿನಾಯಿತಿ ನೀಡುವಂತೆ ಚುನಾವಣಾ ಆಯೋಗವನ್ನು ಕೋರಿದ್ದರು. ಈ ಬಗ್ಗೆ ಸ್ಪಷ್ಟಪಡಿಸಿರುವ ಚುನಾವಣಾ ಆಯೋಗ ನೀತಿ ಸಂಹಿತೆ ಚುನಾವಣೆ ನಡೆಯುತ್ತಿರುವ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಅನ್ವಯಿಸುತ್ತದೆಯೇ ಹೊರತು, ಇಡೀ ಜಿಲ್ಲೆಗೆ ಅನ್ವಯಿಸುವುದಿಲ್ಲ. ದಸರಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.