ಮಂಗಳೂರು: ಯಶಸ್ವಿ ಪ್ರದರ್ಶನ ನೀಡುತ್ತಿರುವ ತುಳು ಚಿತ್ರ ಗಿರಿಗಿಟ್‌ ಗೆ ಕಿರಿಯ ಪ್ರಧಾನ ಸಿವಿಲ್‌ ನ್ಯಾಯಾಲಯ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದೆ.

ಚಿತ್ರದಲ್ಲಿ ನ್ಯಾಯಾಂಗ ಮತ್ತು ವಕೀಲರಿಗೆ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಕೀಲರ ಸಂಘ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದು, ವಕೀಲರ ಸಂಘದ ಪರವಾಗಿ ಹಿರಿಯ ವಕೀಲ ಎಂ.ಪಿ ಶೆಣೈ ವಾದ ಮಂಡಿಸಿದ್ದು, ಕಿರಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಹರೀಶ್‌ ಅವರು ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಚಿತ್ರದ ನಿರ್ದೇಶಕ, ನಟ ರೂಪೇಶ್‌ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ಕೋರ್ಟ್‌ ತಡೆಯಾಜ್ಞೆ ನೀಡಿರುವುದರಿಂದ ಬೇಸರವಾಗಿದೆ. ನಮಗೆ ಎಲ್ಲೂ ಮಾತನಾಡಲು ಅವಕಾಶ ಸಿಗಲಿಲ್ಲ. ಯಾವುದೇ ಪೂರ್ವ ಸೂಚನೆ ನೀಡದೆ ಹೀಗೆ ಏಕಾಏಕಿ ತಡೆಯಾಜ್ಞೆ ನೀಡಿದ್ದಾರೆ. ನಾವು ಯಾವುದೇ ಅಪರಾಧ ಮಾಡಿಲ್ಲ. ಒಬ್ಬ ಬೇಜವಾಬ್ಧಾರಿಯ ವಕೀಲನನ್ನು ತಮಾಷೆಯ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದೇವಷ್ಟೇ. ನಮಗೆ ಸೆನ್ಸಾರ್‌ ಮಂಡಳಿ ಕೂಡಾ ಯು ಸರ್ಟಿಫಿಕೇಟ್‌ ನೀಡಿದೆ. ಆದರೂ ಈ ತಡೆಯಾಜ್ಞೆ ಯಾಕೆಂದು ಅರ್ಥವಾಗುತ್ತಿಲ್ಲ ಎಂದು ತಮ್ಮ ಕಳವಳ ತೋಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.