ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ ಗಿರೀಶ್ ಕಾರ್ನಾಡ್ (81) ಅವರು ಸೋಮವಾರ ವಿಧಿವಶರಾಗಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಗಿರೀಶ್ ಕಾರ್ನಾಡ್ ಅವರು ಸೋಮವಾರ ಮುಂಜಾನೆ ಬೆಂಗಳೂರಿನ ಲಾವೆಲ್ಲಾ ರಸ್ತೆಯ ನಿವಾಸದಲ್ಲಿ ಮೃತಪಟ್ಟಿದ್ದಾರೆ.

ರಘುನಾಥ್ ಮತ್ತು ಕೃಷ್ಣಾಬಾಯಿ ದಂಪತಿಗಳ ಮಗನಾಗಿ 1938ರ ಮೇ 19 ರಂದು ಮಹಾರಾಷ್ಟ್ರದ ಮಾಥೆರನ್ ನಲ್ಲಿ ಗಿರೀಶ್ ಕಾರ್ನಾಡ್ ಅವರು ಜನಿಸುತ್ತಾರೆ. ನಂತರ ಉತ್ತರ ಕನ್ನಡದ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು ಧಾರವಾಡದಲ್ಲಿ ಪ್ರೌಢ ಶಿಕ್ಷಣ ಪಡೆದರು. ನಂತರ ಆಕ್ಸ್ ಫರ್ಡ್ ವಿಶ್ವ ವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಪಡೆದರು.

ಕನ್ನಡ ಸಾಹಿತ್ಯ ಮತ್ತು ನಾಟಕ ಕ್ಷೇತ್ರಕ್ಕೆ ಮೇರು ಕೊಡುಗೆ ನೀಡಿದ ಗಿರೀಶ್ ಕಾರ್ನಾಡ್ ಅವರ ಹಯವದನ, ಯಯಾತಿ, ತುಘಲಕ್, ಅಗ್ನಿ ಮತ್ತು ಮಳೆ ನಾಟಕಗಳು ಪ್ರಸಿದ್ಧವಾದವು.

ಪ್ರಭುದ್ದ ನಟರಾಗಿದ್ದ ಅವರು ಅನೇಕ ಕನ್ನಡ ಹಿಂದಿ ಚಿತ್ರಗಳಲ್ಲೂ ನಟಿಸಿದ್ದರು. ಸಂಸ್ಕಾರ, ತಬ್ಬಲಿಯು ನೀನಾದೆ ಮಗನೆ, ಒಂದಾನೊಂದು ಕಾಲದಲ್ಲಿ, ಚೆಲುವಿ, ಕಾನೂರು ಹೆಗ್ಗಡತಿ ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಿಂದಿ ಚಿತ್ರಗಳಾದ ನಿಶಾಂತ್, ಮಂಥನ್, ಪುಕಾರ್, ಇತ್ತೀಚಿನ ಏಕ್ ಥಾ ಟೈಗರ್, ಟೈಗರ್ ಜಿಂದಾ ಹೈ ಮುಂತಾದ ಚಿತ್ರಗಳಲ್ಲಿ ತನ್ನ ಪ್ರಭುದ್ದ ನಟನೆಯಿಂದ ಮನೆಮಾತಾಗಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.