ಮೈಸೂರು : ಒಂದೆಡೆ ಕಾಂಗ್ರೆಸ್​-ಜೆಡಿಎಸ್​ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾದೆ. ಇನ್ನೊಂದೆಡೆ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇನ್ನೂ ಸುಪ್ರೀಂಕೋರ್ಟ್​ನಲ್ಲಿ ಇತ್ಯರ್ಥವಾಗಿಲ್ಲ. ರಾಜ್ಯದಲ್ಲಿ ಈಗಾಗಲೇ ನೀತಿಸಂಹಿತೆ ಜಾರಿಯಾಗಿದ್ದು,  ಉಪ ಚುನಾವಣೆಗೆ ಇನ್ನು ಕೇವಲ 1 ತಿಂಗಳಿರುವ ಹಿನ್ನೆಲೆಯಲ್ಲಿ ಇಂದು ಮಾಜಿ ಶಾಸಕ ಹೆಚ್. ವಿಶ್ವನಾಥ್​ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಉಪಚುನಾವಣೆ ಬಗ್ಗೆ ಯಾರೂ ಆತಂಕ ಪಡಬೇಡಿ. ಸುಪ್ರೀಂಕೋರ್ಟ್​ನಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ. ನಾವು ರಾಜೀನಾಮೆ ಕೊಟ್ಟಿದ್ದು ಅಧಿಕಾರಕ್ಕಾಗಿ ಅಲ್ಲ. ರಾಕ್ಷಸ ರಾಜಕಾರಣಕ್ಕೆ ಬೇಸತ್ತು ನಾವು ರಾಜೀನಾಮೆ ನೀಡಿದ್ದೆವು.  ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮನ್ನು ದುಡ್ಡಿಗಾಗಿ ಮಾರಿಕೊಂಡಿರಿ ಎಂದು ಹೀಯಾಳಿಸುತ್ತಿದ್ದಾರೆ.  ಅವರ ಹೇಳಿಕೆಯನ್ನು ವಾಪಾಸ್​ ತೆಗೆದುಕೊಳ್ಳಬೇಕು. ಎಂಟಿಬಿ ನಾಗರಾಜ್​ ಕಾಂಗ್ರೆಸ್​ ಪಕ್ಷದಲ್ಲಿ ಹೇಗಿದ್ದರು ಎಂಬುದು ಸಿದ್ದರಾಮಯ್ಯನವರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.ನಮ್ಮನ್ನು ಅನರ್ಹರು, ಅಬ್ಬೆಪಾರಿಗಳು ಎಂದು ಕರೆಯಬೇಡಿ. ಎಂದು ಹೆಚ್. ವಿಶ್ವನಾಥ್ ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.