ಮುಂಬೈ : ವಾಣಿಜ್ಯನಗರಿ ಮುಂಬೈನಲ್ಲಿ ವರುಣನ ಅಬ್ಬರ ಜೋರಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು ಪರದಾಡುವಂತಾಗಿದೆ . ನಗರದಾದ್ಯಂತ ಭಾರೀ ಮಳೆಯಾಗುತ್ತಿರುವ ಕಾರಣ, ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಮುಂಬೈ, ಥಾಣೆ, ಕೊಂಕಣ ಮತ್ತು ರಾಯಗಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಲ್ಲಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಮುಂಬೈನಲ್ಲಿ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಮುಂಬೈ ನಗರದ ವೆರ್ಸೋವಾ ಪ್ರದೇಶದಲ್ಲಿ ಕೇವಲ 3 ಗಂಟೆಗಳಲ್ಲಿ 50 ಮಿ.ಮೀ ಮಳೆಯಾಗಿದೆ. ಮುಂಬೈ ನಗರ ಹೊರತುಪಡಿಸಿ, ಪಾಲ್ಗರ್, ಥಾಣೆ ಮತ್ತು ರಾಯಗಡ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಮಳೆಯಾಗುವ ಭಾರೀ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.