ತೋನ್ಸೆ – ಹೂಡೆಯ ಸಾಲಿಹಾತ್ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ ಆಚರಿಸಲಾಯಿತು. ಸಾಲಿಹಾತ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜಿ. ಇಮ್ತಿಯಾಝ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ “ವಿದ್ಯಾರ್ಥಿ ದೆಸೆಯಲ್ಲಿಯೇ ಸಮಾನತೆ, ಐಕ್ಯತೆ,ಸೌಹಾರ್ದ ಭಾವನೆಗಳನ್ನು ಮೂಡಿಸಿಕೊಳ್ಳಬೇಕು, ಎಲ್ಲರೊಂದಿಗೆ ಕೂಡಿ ಬಾಳುವ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು” ಎಂದು ಹೇಳಿದರು.

ಸಾಲಿಹಾತ್ ಕಾಲೇಜಿನ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಾಲಿಹಾತ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ|| ಸಬೀನಾ, ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಶಬಾನಾ ಮುಮ್ತಾಜ್ ಹಾಗೂ ಉಪನ್ಯಾಸಕರು ಮುಂತಾದವರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.