ಮೂಡುಬಿದಿರೆಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಡಿಸೆಂಬರ್‌ನಲ್ಲಿ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಗಳ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಯ ಸಮಾರೋಪ ಸಮಾರಂಭದಲ್ಲಿ ನಾಡು ನುಡಿಗೆ ವಿಶೇಷ ಸೇವೆ ಸಲ್ಲಿಸಿದ 15 ಮಂದಿ ಸಾಧಕರನ್ನು ‘ಆಳ್ವಾಸ್ ನುಡಿಸಿರಿ ಪ್ರಶಸ್ತಿ’ ಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪುರಸ್ಕೃತರು: ಬಳ್ಳಾರಿ ಪಾಂತ್ರ್ಯದ ಧರ್ಮಾಧ್ಯಕ್ಷರಾಗಿರುವ ಬಿಷಪ್ ಹೆನ್ರಿ ಡಿ’ಸೋಜ, ಸಾಮಾಜಿಕ ನ್ಯಾಯದ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ, ಸಂಶೋಧಕ ಧಾರವಾಡದ ಪ್ರೊ.ತೇಜಸ್ವಿ ಕಟ್ಟೀಮನಿ, ವಿಮರ್ಶಕ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ, ಮಹಿಳಾಪರ ಹೋರಾಟಗಾರ್ತಿ ಡಾ.ವಿಜಯಾದಬ್ಬೆ, ತುಮಕೂರಿನ ಕವಿ ಪ್ರೊ. ಕೆ.ಬಿ.ಸಿದ್ಧಯ್ಯ, ಕಾದಂಬರಿಕಾರ ಮೈಸೂರು ಹೆಬ್ಬಾಳದ ಪ್ರೊ.ಜಿ.ಎಚ್ ಹನ್ನೆರಡುಮಠ, ಮಂಗಳೂರು ವಿಶ್ವ ವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಬಿ.ಸುರೇಂದ್ರರಾವ್, ಯಕ್ಷಗಾನ ವಿಮರ್ಶಕ ಕಾರ್ಕಳ ಮಾಳದ ಡಾ. ಎಂ. ಪ್ರಭಾಕರ ಜೋಶಿ, ತೂಗು ಸೇತುವೆಗಳ ಸರದಾರ ಖ್ಯಾತಿಯ ಗಿರೀಶ್ ಭಾರದ್ವಾಜ್, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ಸುಗಮ ಸಂಗೀತ ಕ್ಷೇತ್ರದ ಕಲಾವಿದೆ ರತ್ನಮಾಲಾ ಪ್ರಕಾಶ್, ನಾಟಕಕಾರ ಮುಂಬಯಿ ಕನ್ನಡಿಗ ಡಾ.ತೋನ್ಸೆ ವಿಜಯ್‌ಕುಮಾರ್‌ಶೆಟ್ಟಿ ಮತ್ತು ರಥಶಿಲ್ಪಿ ಕೋಟೇಶ್ವರದ ಲಕ್ಷ್ಮೀನಾರಾಯಣ ಆಚಾರ್ಯ ಇವರು 2017ರ ಆಳ್ವಾಸ್ ನುಡಿಸಿರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.