ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸೆಪ್ಟಂಬರ್ 23ರಂದು ನ್ಯೂಯಾರ್ಕ್‌ನಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್o ಅವರನ್ನು ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಉಭಯ ರಾಷ್ಟ್ರಗಳ ನಾಯಕರು ಕಾಶ್ಮೀರ ವಿಚಾರ ಪ್ರಸ್ತಾಪ ಮಾಡುವ ಸಾಧ್ಯತೆಗಳಿವೆ ಎಂದು ಡಾನ್ ಪತ್ರಿಕೆ ಶುಕ್ರವಾರ ವರದಿ ಮಾಡಿದೆ.

ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಇಮ್ರಾನ್ ಖಾನ್ ಅಮೆರಿಕಕ್ಕೆ ತೆರಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟಂಬರ್ 22ರಂದು ಟ್ರಂಪ್ ಅವರನ್ನು ಭೇಟಿಯಾಗಲಿದ್ದಾರೆ. ಅದರ ಮರುದಿನ ಇಮ್ರಾನ್ ಖಾನ್ ಅಮೆರಿಕ ಅಧ್ಯಕ್ಷರನ್ನು ಭೇಟಿಯಾಗಲು ಸಮಯ ನಿಗದಿಯಾಗಿದೆ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರು ಹೂಸ್ಟನ್‌ನಲ್ಲಿ ಹಮ್ಮಿಕೊಂಡಿರುವ “ಹೌಡಿ ಮೋದಿ” ಕಾರ್ಯಕ್ರಮದಲ್ಲಿ ಟ್ರಂಪ್ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.