ನವದೆಹಲಿ: ಇಂದು ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಲೋಕಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವ ರಾಹುಲ್ ಗಾಂಧಿ ಮನವೊಲಿಕೆ ಕಸರತ್ತು ಬಿರುಸಿನಿಂದ ಸಾಗಿರುವಂತೆಯೇ ಅತ್ತ ಕಾಂಗ್ರೆಸ್ ಸಂಸದೀಯ ನಾಯಕರ ಆಯ್ಕೆ ಕಸರತ್ತು ಇಂದು ನಡೆಯಲಿದೆ.

ಮೂಲಗಳ ಪ್ರಕಾರ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಸಂಸದೀಯ ನಾಯಕರಾಗಿ ಆಯ್ಕೆಯಾಗುವುದಕ್ಕೆ ಹಿಂದೇಟು ಹಾಕಿದ್ದು, ಇದೇ ಕಾರಣಕ್ಕೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷಗಾದಿಯಿಂದ ಕೆಳಗಿಳಿದಿರುವ ರಾಹುಲ್ ಗಾಂಧಿ ಕೊನೆಯ ಪಕ್ಷ ಸಂಸದೀಯ ನಾಯಕರಾಗಿ ಸಂಸತ್ ನಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು ಎಂಬುದು ಕಾಂಗ್ರೆಸ್ ಸಂಸದರ ಅಭಿಲಾಷೆಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.