ತುಮಕೂರು: ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಬಡವರಿಗೆ ನೀಡಬೇಕೆಂಬ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದಿದ್ದರು.ಮೊದಮೊದಲು ಚೆನ್ನಾಗಿ ನಡೆಯುತಿದ್ದ ಇಂದಿರಾ ಕ್ಯಾಂಟೀನ್ ಗೆ ದಿನ ಕಳೆದಂತೆ ಗ್ರಾಹಕರ ಜನಸಂಖ್ಯೆ ಕಡಿಮೆ ಯಾಗುತ್ತಿದೆ.

ಕೂಲಿ ಕಾರ್ಮಿಕರು ಬಡವರು ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ.ಅಂತವರು ಕಡಿಮೆ ಬೆಲೆಯಲ್ಲಿ ಹೊಟ್ಟೆತುಂಬ ಊಟ ಮಾಡಲಿ ಎಂಬ ಉದ್ದೇಶದಿಂದ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದರು. ಸಾವಿರಾರು ಜನ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಊಟ ಮಾಡಿ ತಮ್ಮ ಹಸಿವನ್ನು ನೀಗಿಸಿಕೊಂಡರು. ಆದರೆ ಅತ್ತ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಕೂಡ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದೆ.ಈಗ ದಿನಕಳೆದಂತೆ ಇಂದಿರಾ ಕ್ಯಾಂಟೀನ್ ಗೆ ಬರುವ ಜನಸಂಖ್ಯೆ ಕೂಡ ಕಡಿಮೆ ಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.