ಜಮ್ಮು: ಜಮ್ಮು ನಗರದ ಮಧ್ಯ ಭಾಗದಲ್ಲಿ ಚಲಿಸುತ್ತಿದ್ದ ಬಸ್ಸಿನಡಿಯಲ್ಲಿ ಗ್ರೈನೇಡ್ ದಾಳಿಯಾಗಿ 18 ಮಂದಿ ಗಾಯಗೊಂಡಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಮೊದಲಿಗೆ ಬಸ್ಸಿನ ಚಕ್ರ ಸ್ಪೋಟಗೊಂಡಿದೆ ಎಂದು ಭಾವಿಸಲಾಗಿತ್ತು. ನಂತರ ಬಸ್ಸಿನಡಿಯಲ್ಲಿಟ್ಟ ಗ್ರೈನೇಡ್ ಸ್ಪೋಟಗೊಂಡು ಈ ದುರ್ಘಟನೆ ಸಂಭವಿಸಿದೆಯೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗ್ರೈನೇಡ್ ಇಟ್ಟು ಈ ಕೃತ್ಯ ನಡೆಸಿದವರ ಶೋಧ ಕಾರ್ಯ ಮುಂದುವರಿದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಗರದ ಮಧ್ಯ ಭಾಗದಲ್ಲಿ ಬಸ್ಸಿನಡಿಗೆ ಗ್ರೈನೇಡ್ ಇಡಲು ಹೇಗೆ ಸಾಧ್ಯವಾಯಿತು ಎಂಬ ಪ್ರಶ್ನೆಯ ಜಾಡು ಹಿಡಿದು ಪೊಲೀಸರು ತನಿಖೆ ನಡೆಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.