ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಅನಿಂಡ ಬಂಧಿಸಲಾಗಿದ್ದ ಮಾಜಿ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಮಾ. 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕಾರ್ತಿ ಪರ ವಕೀಲರು ಕಾರ್ತಿ ಚಿದಂಬರಂ ಅವರಿಗೆ ತಿಹಾರ್ ಜೈಲಿನಲ್ಲಿ ಪ್ರತ್ಯೇಕ ಸೆಲ್ ಕೋರಿ ಮನವಿ ಸಲ್ಲಿಸಿದ್ದು ಇದಕ್ಕೆ ನ್ಯಾಯಾಲಯವು ಕಾರ್ತಿ ಅವರು ಜೈಲು ಮಾರ್ಗಸೂಚಿಗಳನ್ನು ಅನುಸರಿಸಬೇಕಾಗುವುದು ಎಂದಿದ್ದಾರೆ
ಹಾಗೆಯೇ ಕಾರ್ತಿ ಅವರ ಜಾಮೀನು ಅರ್ಜಿಯನ್ನು ಶೀಘ್ರವಾಗಿ ವಿಚಾರಣೆಗೆ ತೆಗೆದುಕೊಳ್ಳುವ ಸಂಬಂಧ ನ್ಯಾಯಾಲಯ ಜಾಮೀನು ಅರ್ಜಿಯನ್ನು ಈ ಹಿಂದೆ ನಿಗದಿಗೊಂಡಂತೆ ಮಾ.15ರಂದು ವಿಚಾರಣೆ ನಡೆಸಲಾಗುತ್ತದೆ ಎಂದಿದೆ. ಅಲ್ಲದೆ ಕಾರ್ತಿ ಅವರಿಗೆ ಜೈಲು ವಾಸದ ಸಮಯದಲ್ಲಿ ಮನೆಯ ಆಹಾರ ನೀಡಬೇಕೆನ್ನುವ ಕೋರಿಕೆಯನ್ನು ನ್ಯಾಯಾಲಯ ನಿರಾಕರಿಸಿದೆ.
ಇದಕ್ಕೂ ಮುನ್ನ ಕಾರ್ತಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸುನೀಲ್ ರಾಣಾ ಅವರೆದುರು ಹಾಜರುಪಡಿಸಲಾಗಿತ್ತು.
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಅವರನ್ನು ಫೆಬ್ರವರಿ 28ರಂದು ಚೆನ್ನೈ ವಿಮಾನ ನಿಲ್ದಾನದಲ್ಲಿ ಸಿಬಿಐ ವಶಕ್ಕೆ ಪಡೆದಿತ್ತು. ಅಂದಿನಿಂದಲೂ ಅವರು ಸಿಬಿಐ ವಶದಲ್ಲಿ ವಿಚಾರಣೆಗೆ ಒಳಪಟ್ಟಿದ್ದಾರೆ.
ಕಾರ್ತಿ ಚಿದಂಬರಂ ಅವರ ವಿಚಾರಣೆ ವೇಳೆ ಅವರ ತಂದೆ ಪಿ. ಚಿದಂಬರಂ ಅವರೂ ಸಹ ನ್ಯಾಯಾಲಯದಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.