ಕೋಲಾರ: ಗುತ್ತಿಗೆ ವಿಚಾರದಲ್ಲಿ ಗಲಾಟೆಯಾದ ಕಾರಣಕ್ಕೆ ತಲ್ವಾರ್ ಹಿಡಿದು ಯುವಕನೊಬ್ಬ ಗ್ರಾಮದಲ್ಲಿ ಓಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಗ್ರಾಮ ಪಂಚಾಯ್ತಿ ಸದಸ್ಯನೊಬ್ಬನ ತಮ್ಮ ತಲ್ವಾರ್ ಹಿಡಿದು ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದಾನೆ.ತಲ್ವಾರ್ ಹಿಡಿದು ಅಲ್ಲಿಂದಿಲ್ಲಿ ಓಡಾಡಿದ್ದಾನೆ.
ಈತನನ್ನು ಸಕ್ಕನಹಳ್ಳಿ ಗ್ರಾಮದ ಸಂತೋಷ್ ರೆಡ್ಡಿ ಎಂದು ಗುರುತಿಸಲಾಗಿದೆ.ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.