ನವದೆಹಲಿ(ಆ.01): ತ್ರಿವಳಿ ತಲಾಖ್ ನಿಷೇಧಿಸುವ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆಯಡಿ 2019ಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

ರಾಷ್ಟ್ರಪತಿ ಅಂಕಿತ ದೊರೆತ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಗೊಂಡಿರುವ ತ್ರಿವಳಿ ತಲಾಖ್ ಮಸೂದೆ ಶೀಘ್ರದಲ್ಲೇ ಕಾನೂನಾಗಿ ಜಾರಿಗೆ ಬರಲಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ, ಇನ್ನು ಮುಂದೆ ತ್ರಿವಳಿ ತಲಾಖ್ ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲ್ಪಡಲಿದ್ದು ತ್ರಿವಳಿ ತಲಾಖ್ ಮೂಲಕ ವಿಚ್ಚೇದನ ನೀಡುವ ಪತಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.