ಬೆಂಗಳೂರು :ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತೆರಳಿದ್ದೇನೆ ಎಂದಿರುವುದು ಬರೇ ನಾಟಕ ಎಂದು ಎಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕುಮಾರಸ್ವಾಮಿಯವರು ತಮ್ಮ ಖಾತೆಯಲ್ಲಿ “ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತೆರಳಿದ್ದೇನೆ ಎಂದಿರುವುದು ಒಂದು ‘ರಾಜಕೀಯ ನಾಟಕ’. ಅಮಿತ್ ಶಾ ರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೇ ಬಿ ಎಸ್ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ”ಎಂದು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.