ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರ ಪತ್ನಿಯ ಸಾವು ಸಹಜ ಸಾವಲ್ಲ ಎಂದು ಕುಮಾರಸ್ವಾಮಿಯವರು ಪ್ರಸ್ತಾಪಿಸಿದ್ದಾರೆ.ಬಿಎಸ್ ಯಡಿಯೂರಪ್ಪ ಅವರ ಪತ್ನಿಯದ್ದು ಸಹಜ ಸಾವಲ್ಲ ಎಂದು ಹೇಳಿಕೆ ನೀಡುವ ಮೂಲಕ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಬಿಎಸ್ ಯಡಿಯೂರಪ್ಪನವರ ಪತ್ನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಒಂದು ಅಡಿ ಇರುವ ನೀರಿನ ಸಂಪಿಗೆ ಬಿದ್ದು ಸಾಯಲು ಸಾಧ್ಯವೇ? ಇದು ಅನುಮಾನಾಸ್ಪದ ಸಾವಲ್ಲವೇ ಎಂದು ಪ್ರಶ್ನಿಸಿದರು.

ನಂತರ ಮಾತನಾಡಿದ ಅವರು, ನನ್ನ ಸರಕಾರ ಕೆಡವಲು ಸಿಪಿ ಯೋಗೇಶ್ವರ್ ಪ್ರಮುಖ ಪಾತ್ರ ವಹಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ರಾಜಕಾರಣ ಇರೋದೆ ಕಳ್ಳರಿಗೆ ಮಾತ್ರ, ಒಳ್ಳೆಯವರಿಗೆ ಅಲ್ಲ. ಹೀಗಾಗಿ ನಾನು ರಾಜಕೀಯದಿಂದ ದೂರ ಹೋಗುಬೇಕು ಅಂದುಕೊಂಡಿದ್ದೇನೆ ಎಂದರು. ನಾನೇನು ಪಾಪದ ಹಣ ಸಂಪಾದನೆ ಮಾಡಿಲ್ಲ. ಜಾರಿ ನಿರ್ದೇಶನಾಲಯ, ಸಿಬಿಐಗೆ ಹೆದರುವುದಿಲ್ಲ ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ಹೇಳಿದ್ದು, ನಾನೇ ಮುಖ್ಯಮಂತ್ರಿಯಾಗಿದ್ದರೆ ಅದರ ಕಥೆಯೇ ಬೇರೆಯಾಗುತ್ತಿತ್ತು, ಆದರೆ ಜನರಿಗೆ ನನ್ನ ಮೇಲೆ ನಂಬಿಕೆ ಇರಲಿಲ್ಲ ಎಂದು ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.