ಶಿವಮೊಗ್ಗ : ಕೊಸ್ಟಲ್ ಮಿರರ್ ನ್ಯೂಸ್:  ಕುವೆಂಪು ವಿಶ್ವವಿದ್ಯಾಲಯವು ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ಶಂಕರಘಟ್ಟದ ಘಟಿಕೋತ್ಸವ ಸಭಾಂಗಣದಲ್ಲಿ ಕುವೆಂಪು ವಿಶ್ವವಿದ್ಯಾಲಯದ 28 ನೇ ಘಟಿಕೋತ್ಸವ ಸಮಾರಂಭವನ್ನು ಆಯೋಜಿಸಿದೆ. ಈ ಘಟಿಕೋತ್ಸವದಲ್ಲಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಘಟಿಕೋತ್ಸವ ಭಾಷಣ ಮಾಡಲಿರುವರು ಎಂದು ವಿವಿಯ ಕುಲಸಚಿವ ಪ್ರೊ.ಹೆಚ್.ಎಸ್.ಭೋಜ್ಯಾನಾಯ್ಕ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.