ಬೆಂಗಳೂರು : ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಯಾವುದೇ ಕಾರಣಕ್ಕೂ ಗೆಲುವು ಸಾಧಿಸಲ್ಲ. ಮೈತ್ರಿ ಸರ್ಕಾರ ಪತನವಾಗಲಿದೆ. ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ನಾಡಿನ ಜನತೆ ನೋಡುತ್ತಿದ್ಧಾರೆ. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷಕ್ಕೆ ಬೆಂಬಲ ಇಲ್ಲ. ಮೈತ್ರಿ ಪಕ್ಷ ಬಹುಮತ ಪಡೆಯುವಲ್ಲಿ ವಿಫಲವಾಗಲಿದೆ. ನಾವು ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದ್ದೇವೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಶ್ವಾಸಮತ ಯಾಚನೆ ಚರ್ಚೆಯನ್ನು ಎಷ್ಟೇ ಮುಂದೂಡಿದರೂ ಈ ಸರ್ಕಾರ ಅದರಲ್ಲಿ ಗೆಲುವು ಸಾಧಿಸಲ್ಲ. ನಿಶ್ಚಿತವಾಗಿ ಬಿಜೆಪಿ ಅವಿಶ್ವಾಸಮತದಲ್ಲಿ ಗೆಲುವು ಸಾಧಿಸಲಿದೆ. ಸಿಎಂ ಈಗ ದೀರ್ಘವಾಗಿ ಮಾತನಾಡಲಿ, ಆದರೆ ಅವರಿನ್ನು 4 ವರ್ಷ 8 ತಿಂಗಳು ಮಾತನಾಡಲಾಗದು ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ, ರಾಜ್ಯದ ಜನ ಮೈತ್ರಿ ಸರ್ಕಾರವನ್ನು ತಿರಸ್ಕಾರ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳಿಗೆ ಒಂದು ಸ್ಥಾನ ಕೊಟ್ಟಿದ್ದಾರೆ. ಹಾಗಾಗಿ ನಮಗೆ ವಿಶ್ವಾಸವಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಎಚ್.ಡಿ.ಕುಮಾರಸ್ವಾಮಿ ಇಂದಿನಿಂದ ವಿಶ್ವಾಸಮತ ಯಾಚನೆ ಚರ್ಚೆ ಆರಂಭಿಸಲಿದ್ದಾರೆ. ಅವರು ಇಂದೇ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದರೆ ಒಳಿತು ಎಂದಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.