ಮಂಗಳೂರು: ಅಮಲು ಬರಿಸುವ ಪದಾರ್ಥವನ್ನು ವಿದ್ಯಾರ್ಥಿನಿಗೆ ತಿನ್ನಿಸಿ ಅರೆ ಪ್ರಜ್ಞಾವಸ್ಥೆ ತಲುಪಿದ ಬಳಿಕ ಸಹಪಾಠಿ ವಿದ್ಯಾರ್ಥಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಪುತ್ತೂರಿಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಎಸ್‌ಪಿ ಬಿ.ಎಂ. ಲಕ್ಷ್ಮಿ ಪ್ರಸಾದ್ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ಪುತ್ತೂರಿನ ಖಾಸಗಿ ಕಾಲೇಜಿನ ಒಟ್ಟು 4 ಜನ ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದುಕೊಂಡು ಹೋಗಿ ವಿದ್ಯಾರ್ಥಿನಿಗೆ ಡ್ರಗ್ಸ್‌ ತಿನ್ನಿಸಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದರು. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್‌ ಆಗಿತ್ತು.

ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.