ನವದೆಹಲಿ: ಮನ್ ಕಿ ಬಾತ್ ಪ್ರಧಾನಿ ಮೋದಿಯವರು 2014 ರಲ್ಲಿ ಆಕಾಶವಾಣಿಯ ಮೂಲಕ ಜನರರೊಂದಿಗೆ ಮಾತನಾಡುವ ವಿಶೇಷ ಕಾರ್ಯಕ್ರಮ. ಪ್ರಧಾನಿ ಮೋದಿ ಎರಡನೇ ಬಾರಿಗೆ ಆಯ್ಕೆಯಾಗಿ ಬಂದ ಮೇಲೆ ಅವರ ಮೊದಲ ಮನ್ ಕಿ ಬಾತ್ ಕಾರ್ಯಕ್ರಮ ಜೂನ್ 30 ಕ್ಕೆ ನಡೆಯಲಿದೆ.

ಕಳೆದ ಫೆಬ್ರವರಿಯಲ್ಲಿ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮ ಆಯೋಜಿಸಿದ್ದ ಮೋದಿ, ಒಟ್ಟು 53 ಬಾರಿ ಈ ಕಾರ್ಯಕ್ರಮದ ಮೂಲಕ ಜನರೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನರೇಂದ್ರ ಮೋದಿಯವರು ದೇಶದ ಜನರಿಗೆ ಸಂಬಂಧಪಟ್ಟ ಸಮಸ್ಯೆಗಳು, ವಿಚಾರಗಳ ಬಗ್ಗೆ ಮನ್​ ಕೀ ಬಾತ್​ದಲ್ಲಿ ಮಾತನಾಡಲಿದ್ದಾರೆ. ಹಾಗೇ ಅವರು ಯಾವ ವಿಷಯದ ಬಗ್ಗೆ ಮಾತನಾಡಬಹುದು ಎಂದು ಜನರೂ ಕೂಡ ತಿಳಿಸಬಹುದು. ಅದಕ್ಕೆ ಸಂಬಂಧಪಟ್ಟಂತೆ ಜೂ.11ರಿಂದ 26ರ ವರೆಗೆ ದೂರವಾಣಿ ಸಂಖ್ಯೆ 1800-11-7800ಗೆ ಕರೆ ಮಾಡಬಹುದು.

ಅಥವಾ ಮೈ ಗವ್​ (MyGov) ವೇದಿಕೆಯಲ್ಲೂ ತಿಳಿಸಬಹುದು ಎಂದು ದೇಶದ ಅಭಿವೃದ್ಧಿ ಹಾಗೂ ಬೆಳವಣಿಗೆಗಾಗಿ ನಾಗರಿಕರು ಹಾಗೂ ಕೇಂದ್ರ ಸರಕಾರದ ನಡುವೆ ಸಂಪರ್ಕ ಮಾಡಬಹುದಾದ ಸಾಮಾಜಿಕ ಜಾಲತಾಣದ ವೇದಿಕೆಯಾಗಿರುವ ”ಮೈ ಗವ್‌’ ವೇದಿಕೆ ಟ್ವೀಟ್​ ಮಾಡಿ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.