ಕೊನೆಯ ಕ್ಷಣದಲ್ಲಿ ಚಂದ್ರಯಾನ-2 ವಿಫಲ; ಚಂದ್ರನ ದಕ್ಷಿಣ ಗೋಳಾರ್ಧ ಅಧ್ಯಯನ ಮಾಡುವ ಇಸ್ರೋ ಕನಸು ಭಗ್ನ

358

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಕನಸಿನ ಕೂಸು ಚಂದ್ರಯಾನ 2 ಕೊನೆಯ ಕ್ಷಣದಲ್ಲಿ ವಿಫಲವಾಗಿದೆ.

ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಆಗಮಿಸಿದ್ದರು. ಈ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವುದರಲ್ಲಿದ್ದರು. ಆದರೆ, ಈಗ ಚಂದ್ರಯಾನ ಕೊನೆಯ ಕ್ಷಣದಲ್ಲಿ ವಿಫಲವಾಗಿರುವುದು ಬೇಸರ ಮೂಡಿಸಿದ್ದರೂ ಇಸ್ರೋದ ಪ್ರಯತ್ನಕ್ಕೆ ಇಡೀ ದೇಶವೇ ಹೆಮ್ಮೆ ಪಡುವಂತಾಗಿದೆ.ವಿಕ್ರಮ್ ಲ್ಯಾಂಡರ್ ಚಂದ್ರನಿಂದ 2.1 ಕಿ.ಮೀ ದೂರದಲ್ಲಿರುವಾಗ ಎಲ್ಲವೂ ಸಾಮಾನ್ಯವಾಗಿತ್ತು. ಆನಂತರ ಲ್ಯಾಂಡರ್​ ಹಾಗೂ ಭೂಮಿ ನಡುವೆ ಇದ್ದ ಸಂಪರ್ಕ ಕಡಿತಗೊಂಡಿದೆ. ಇದರ ದತ್ತಾಂಶ ವಿಶ್ಲೇಷಣೆ ಮಾಡಬೇಕಿದೆ ಎಂದು ಇಸ್ರೋ ಮುಂಜಾನೆ 2.15ಕ್ಕೆ ಹೇಳಿಕೆ ನೀಡಿತ್ತು. ಈಗ ಯೋಜನೆ ಯಶಸ್ವಿಯಾಗಿಲ್ಲ ಎಂದು ಇಸ್ರೋ ಅಧಿಕೃತವಾಗಿ ಘೋಷಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.