ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ನಳಿನ್ ಕುಮಾರ್ ಕಟೀಲ್​​ಗೆ ಇಂದು ಉಡುಪಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಉಡುಪಿಯ ತಾಲೂಕು ಕಚೇರಿಯಿಂದ ಸರ್ವಿಸ್ ಬಸ್ ಸ್ಟಾಂಡ್ ನವರಿಗೆ ತೆರೆದ ವಾಹನದಲ್ಲಿ ಮೆರವಣಿಗೆಯ ಮುಖಾಂತರ ಸಾಗಿ, ನಂತರ ಉಡುಪಿಯ ಕಿದಿಯೂರು ಹೋಟೆಲ್​​ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದರು

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಹಾಗೂ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಸುಕುಮಾರ ಶೆಟ್ಟಿಯವರಿಗೆ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಕುರ್ಚಿಯನ್ನೂ ಕೂಡ ಇಟ್ಟಿರಲಿಲ್ಲ ಎನ್ನಲಾಗಿದೆ.

ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿದ್ದ ಅವರು ಗೈರಾಗಿರಬಹುದು ಎಂದು ಊಹಿಸಲಾಗಿದೆ ಈ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.