ಬೆಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರಿಗೆ ಬಂದ ಸ್ಥಿತಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬರಬಾರದು ಡಿ.ಕೆ ಶಿವಕುಮಾರ್ ಎಂದಿಗೂ ಕುಗ್ಗಬಾರದು ಧೈರ್ಯ ತಂದುಕೊಳ್ಳಬೇಕು ಎಂದು ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು “ಸಿದ್ಧಾರ್ಥ್ 1,000 ಕೋಟಿ ರೂ. ಸಾಲ ತೀರಿಸಲಾಗದ ವ್ಯಕ್ತಿಯೇನಲ್ಲ. ಆದರೆ ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು.ಈ ರೀತಿಯಾದಾಗ ಮನುಷ್ಯ ಬಗ್ಗಿಹೋಗುತ್ತಾರೆ. ಡಿ.ಕೆ.ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ಮಾನಸಿಕ ಸ್ಥೈರ್ಯ ಕಳೆದುಕೊಳ್ಳಬಾರದು. ಎಲ್ಲವನ್ನೂ ದೈರ್ಯದಿಂದ ಎದುರಿಸಬೇಕು.ಸಿದ್ಧಾರ್ಥ್ ಕುಟುಂಬ ಹಾಗೂ ಡಿ.ಕೆ.ಶಿವಕುಮಾರ್ ಅವರ ನೋವಿನಲ್ಲಿ ನಾವು ಇದ್ದೇವೆ ಎಂದು ತಿಳಿಸಲು ಇಲ್ಲಿ ಸೇರಿದ್ದೇವೆ. ಡಿ.ಕೆ.ಶಿವಕುಮಾರ್ ಅವರು ಹೊರ ಬಂದರೆ ಸಂತೋಷ ಪಡುವ ವ್ಯಕ್ತಿಗಳಲ್ಲಿ ನಾನು ಕೂಡ ಒಬ್ಬ” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.