ನವದೆಹಲಿ: ನಿಯೋಜಿತ ಪ್ರಧಾನಿ ಮೋದಿ ಅವರ ಪದಗ್ರಹಣಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಮೇ 30 ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ  ಬಿಮ್ ಸ್ಟೆಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಲಾಗಿದೆ  ಎಂದು ಮೂಲಗಳು ಹೇಳಿವೆ. ಮೇ 30ರಂದು ರಾಷ್ಟ್ರಪತಿ ಭವನದಲ್ಲಿ ಸಂಜೆ 7 ಗಂಟೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನೂತನ ಸಂಪುಟದ ಸಚಿವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರದ ಗೌಪ್ಯತೆ ಬೋಧಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ಹೇಳಲಾಗಿದೆ.

ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್, ಶ್ರೀಲಂಕಾ, ಥೈಲ್ಯಾಂಡ್ , ನೇಪಾಳ ಮತ್ತು ಭೂತಾನ್  ಬಿಮ್ ಸ್ಟೆಕ್ ರಾಷ್ಟ್ರಗಳಾಗಿವೆ.ದಕ್ಷಿಣ ಹಾಗೂ ಆಗ್ನೇಯ ಏಷ್ಯಾ ರಾಷ್ಟ್ರಗಳ ನಡುವಣ ಸೇತುವೆಯಾಗಿ ಸೇವೆ ಸಲ್ಲಿಸುವ ಉದ್ದೇಶದೊಂದಿಗೆ 1997 ರ ಬ್ಯಾಂಕಾಂಕ್  ಒಪ್ಪಂದಂತೆ  ಬಿಮ್ ಸ್ಟೆಕ್ ರಾಷ್ಟ್ರಗಳ ಒಕ್ಕೂಟವನ್ನು ರಚಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.