ಮಂಗಳೂರು: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ 75 ರ ಸಂಪೂರ್ಣವಾಗಿ ಹದೆಗೆಟ್ಟಿದ್ದು ವಾಹನ ಸಂಚಾರಕ್ಕೆ ಕಂಟಕವಾಗಿದ್ದು ಇದನ್ನು ಖಂಡಿಸಿ ಪುತ್ತೂರಿನ ನೆಲ್ಯಾಡಿಯಲ್ಲಿ ನಾಗರಿಕರು ಬೃಹತ್ ಪ್ರತಿಭಟನೆ ನಡೆಯಿತು‌. ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಗೆ ಹಲವು ಸಂಘ ಸಂಸ್ಥೆಗಳು ಸಾಥ್ ನೀಡಿದ್ದವು. ಕೆಲ ಕಾಲ ಹೆದ್ದಾರಿಯನ್ನು ತಡೆ ನಡೆಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರಿಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರಸ್ತೆ ಸರಿಪಡಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದ್ದು ದುರಸ್ತಿಯಾಗದಿದ್ದ ಪಕ್ಷದಲ್ಲಿ ಮತ್ತೆ ನಾಗರಿಕರು ಬೀದಿಗಿಳಿಯಲಿದ್ದಾರೆಂದು ಎಚ್ಚರಿಸಿದ್ದಾರೆ.

ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರ ಅಭಿವೃದ್ಧಿ ಕಾಮಗಾರಿ ಆರಂಭಗೊಂಡು ಮೂರು ವರ್ಷ ಕಳೆದಿದೆ. ಆದರೆ ಈ ವರೆಗೂ ಕಾಮಗಾರಿಯು ಕುಂಟುತ್ತಾ ಸಾಗುತ್ತಿದೆ. ಕಾಮಗಾರಿಯ ಗುತ್ತಿಗೆ ಪಡೆದುಕೊಂಡಿರುವ ಎಲ್.ಎನ್.ಟಿ ಕಂಪನಿಯು ಕೆಲವಾರು ಸಮಸ್ಯೆಯಿಂದಾಗಿ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿತ್ತು.ಮಳೆ ಹಾಗೂ ಜಮೀನು ಒತ್ತುವರಿ ಸಮಸ್ಯೆಯಿಂದಾಗಿ ಕಾಮಗಾರಿ ನಡೆಸಲು ಸಾಧ್ಯವಾಗಿಲ್ಲ ಎನ್ನುವುದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಅಧಿಕಾರಿಗಳು ಹೇಳುತ್ತಿದ್ದಾರೆ.

ಅಲ್ಲದೆ ಕಾಮಗಾರಿ ವಹಿಸಿಕೊಂಡ ಎಲ್.ಎನ್.ಟಿ ಕಂಪನಿಯು ಕಾಮಗಾರಿಯನ್ನು ಅರ್ಧದಲ್ಲೇ ನಿಲ್ಲಿಸಿದ ಪರಿಣಾಮ ಈ ಸಮಸ್ಯೆಗೆ ಕಾರಣವಾಗಿದೆ. ಎರಡು ವಾರದಲ್ಲಿ ರಸ್ತೆಯ ಗುಂಡಿ ಮುಚ್ಚುವ ಕಾಮಗಾರಿ ಮುಗಿಸಲಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಹೊಸ ಟೆಂಡರ್ ಕರೆದು ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗಿನ ಕಾಮಗಾರಿ‌ ಆರಂಭಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.