ನೇಪಾಳ:  ನೇಪಾಳದಲ್ಲಿ ಸುರಿದ ಭಾರಿ ಮಳೆ ಹಾಗೂ ಭೂ ಕುಸಿತದಿಂದ 32 ಜನ ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಸಂಭವಿಸಿದ ಪ್ರವಾಹದಿಂದಾಗಿ ಇಪ್ಪತ್ತಕ್ಕೂ ಹೆಚ್ಚು ಜನ ಕಾಣೆಯಾಗಿರುವುದಾಗಿ ಗೃಹಸಚಿವಾಲಯ ತಿಳಿಸಿದೆ. ನಿರಂತರ ಸುರಿದ ಮಳೆಯಿಂದಾಗಿ ಉಂಟಾದ ಪ್ರವಾಹ ಮತ್ತು ಭೂ ಕುಸಿತದಿಂದಾಗಿ ನೇಪಾಳದ 21 ಜಿಲ್ಲೆಗಳಿಗಲ್ಲಿ ತೀವ್ರ ಹಾನಿ ಸಂಭವಿಸಿದೆ. ರಾಜಧಾನಿ ಕಠ್ಮಂಡುವಿನ ರಸ್ತೆಗಳೆಲ್ಲಾ ಪ್ರವಾಹಕ್ಕೆ ಸಿಲುಕಿ ಹಾನಿಯಾಗಿವೆ. ಅಲ್ಲಿನ ರಕ್ಷಣಾ ತಂಡಗಳು  ಪ್ರವಾಹಕ್ಕೆ ಸಿಲುಕಿದ ಮನೆಗಳಲ್ಲಿರುವ ಜನರನ್ನು ರಬ್ಬರ್ ದೋಣಿಗಳ ಮುಖಾಂತರ ಸ್ಥಳಾಂತರಿಸಲಾಗುತ್ತಿದೆ.

ದಕ್ಷಿಣದ ಬಯಲು ಪ್ರದೇಶಗಳು ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ಅಲ್ಲಿನ ಕುಟುಂಬಗಳು ಸೊಂಟದ ಮಟ್ಟದಲ್ಲಿರುವ ನೀರಿನಲ್ಲಿ ತಮ್ಮ ವಸ್ತುಗಳನ್ನು ತಲೆಯ ಮೇಲೆ ಹೊತ್ತು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವರೆಗೆ 831 ವ್ಯಕ್ತಿಗಳನ್ನು ಪ್ರವಾಹದ ಸ್ಥಳದಿಂದ ಸ್ಥಳಾಂತರಿಸಲಾಗಿದೆ ಎಂದು ನೇಪಾಳದ ಪೊಲೀಸ್ ಪ್ರಧಾನ ಕಚೇರಿ ತಿಳಿಸಿದೆ. ದೇಶದ ವಿವಿಧ ಭಾಗಗಳಲ್ಲಿ ಒಟ್ಟಾರೆಯಾಗಿ 27,830 ಪೊಲೀಸ್ ಸಿಬ್ಬಂದಿಗಳು ರಕ್ಷಣಾ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಪ್ರಧಾನ ಕಚೇರಿಯ ಹಿರಿಯ ಪೊಲೀಸ್ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.