ಮಂಗಳೂರು:ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಯಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ತಡೆಯಲು ಸೇತುವೆಯ ಎರಡು ಬದಿಗಳಲ್ಲಿ ರಕ್ಷಣಾ ಗೋಡೆ ರಚಿಸುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಸಲಹೆ ನೀಡಿದ್ದಾರೆ.

ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆಯ ನಂತರ ಕೆಲವೇ ದಿನಗಳಲ್ಲಿ ನಾಲ್ಕು ಮಂದಿ ಅಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಭವಿಷ್ಯದಲ್ಲಿ ನೇತ್ರಾವತಿ ಸೇತುವೆಗೆ ಸೂಸೈಡ್ ಪಾಯಿಂಟ್ ಎನ್ನುವ ಹಣೆಪಟ್ಟಿ ಬರದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಶಾಸಕ ವ್ಯಾದವ್ಯಾಸ ಕಾಮತ್ ಅವರು “ಅಲ್ಲಿ ಎರಡು ಸೇತುವೆಗಳಿದ್ದು ಎರಡಕ್ಕೂ ಸೂಕ್ತ ವ್ಯವಸ್ಥೆ ಮಾಡಬೇಕಾಗಿದೆ. ಎರಡೂ ಸೇತುವೆಗಳ ನಾಲ್ಕು ಬದಿಗಳಲ್ಲಿಯೂ ಕನಿಷ್ಠ 5 ರಿಂದ 6 ಅಡಿಗಳಷ್ಟು ಎತ್ತರದ ಗ್ರಿಲ್ ಹಾಕಿ ಫೈಬರ್ ತಡೆಗೋಡೆಯ ತರಹ ವ್ಯವಸ್ಥೆ ಮಾಡಿದರೆ ಅದು ಆತ್ಮಹತ್ಯೆಗೆ ಮುಂದಾಗುವವರಿಗೆ ತೊಡಕಾಗಲಿದೆ”ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.