ಉತ್ತರ ಪ್ರದೇಶ: ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಗಂಭೀರವಾದ ಅಪರಾಧ ನಡೆಯದೆ ಇದ್ದ ದಿನವೇ ಇಲ್ಲ ಎನ್ನಬಹುದು. ಇದೀಗ ಸೋನ್ ಭದ್ರಾ ಗ್ರಾಮದಲ್ಲಿ ಅತ್ಯಂತ ಭೀಕರ ಘಟನೆ ಸಂಭವಿಸಿದ್ದು ಭೂ ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮ ಪ್ರಧಾನ ಒಂಭತ್ತು ಮಂದಿ ಗ್ರಾಮಸ್ಥರನ್ನು ಹತ್ಯೆ ಮಾಡಿದ್ದಾನೆ. ಹತ್ಯೆಯಾದವರಲ್ಲಿ ಆರು ಮಂದಿ ಪುರುಷರು ಮತ್ತು ಮೂರು ಮಹಿಳೆಯರು ಸೇರಿದ್ದಾರೆ.

ಜಿಲ್ಲಾಧಿಕಾರಿ ಅಂಕಿತ್ ಕುಮಾರ್ ರವರ ಹೇಳಿಕೆಯಂತೆ ಆರು ಮಂದಿ ಸ್ಥಳದಲ್ಲೇ ಮೃತ ಪಟ್ಟರೆ ಉಳಿದವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಸಾವಿನ ನಿಖರ ಸಂಖ್ಯೆ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಕ್ತ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.