ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಕಾಲೇಜು ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ಈಕೆಯನ್ನು ಘೋಟ್ಕಿಯ ಮಿರ್ಪುರ್ ಮ್ಯಾಥೆಲೊ ನಿವಾಸಿ ನಮೃತಾ ಚಂದಾನಿ ಎಂದು ಗುರುತಿಸಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದನ್ನು ಪ್ರಾಥಮಿಕ ವರದಿಯಲ್ಲಿ ತಿಳಿಸುವುದು ಕಷ್ಟ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ನಮೃತಾ ಕುಟುಂಬಸ್ಥರು ಆರೋಪಿಸಿದ್ದಾರೆ.ನಮೃತಾ ಅವರು ಬಿಬಿ ಆಸಿಫಾ ಡೆಂಟಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದಳು. ನಮೃತಾಳ ಸ್ನೇಹಿತರು ಅವಳ ಕೋಣೆಯ ಬಾಗಿಲು ತಟ್ಟಿದರೂ ಆಕೆ ತೆಗೆಯದಿದ್ದಾಗ ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಮುರಿದು ಕೋಣೆಗೆ ಹೋದಾಗ, ಹಾಸಿಗೆಯ ಮೇಲೆ ಕುತ್ತಿಗೆಗೆ ಹಗ್ಗ ಸುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸದ್ಯ ವಿದ್ಯಾರ್ಥಿನಿಯ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.