ತುಮಕೂರು: ತೆರಿಗೆ ವಂಚನೆ ಆರೋಪ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ ಮಾಜಿ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳು, ಕಚೇರಿಗಳು, ನಿವಾಸಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತುಮಕೂರಿನ ಸಿದ್ಧಾರ್ಥ ನಗರದಲ್ಲಿರುವ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಹಾಗೂ ನೆಲಮಂಗಲ ತಾಲೂಕಿನ ಶಿಕ್ಷಣ ಸಂಸ್ಥೆಗಳು, ಬೆಂಗಳೂರಿನ ಸದಾಶಿವ ನಗರದಲ್ಲಿ ನಿವಾಸ ಸೇರಿದಂತೆ ಮೂರು ಪ್ರತ್ಯೇಕ ಕಡೆಗಳಲ್ಲಿ ಪರಮೇಶ್ವರ್ ಅವರಿಗೆ ಸೇರಿದ ಸ್ವತ್ತುಗಳ ಮೇಲೆ ದಾಳಿಯಾಗಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.ಸದಾಶಿವನಗರದಲ್ಲಿರುವ ಮನೆಯಲ್ಲಿ ಸುಮಾರು ಹತ್ತು ಅಧಿಕಾರಿಗಳ ತಂಡ ಬೆಳಗ್ಗೆ 8 ಗಂಟೆಯಿಂದ ಶೋಧ ನಡೆಸುತ್ತಿದ್ದಾರೆ. ದಾಳಿ ಸಮಯದಲ್ಲಿ ಮನೆಯಲ್ಲಿ ಪರಮೇಶ್ವರ್ ಅವರು ಇರಲಿಲ್ಲ. ಅವರ ಕುಟುಂಬ ಸದಸ್ಯರು, ಆಪ್ತರು, ಕೆಲಸಗಾರರಿಂದಲೂ ಐಟಿ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.