ಚಾಮರಾಜನಗರ: ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಸಹಾಯಕತೆ ತೋರುತ್ತಿದೆ. ಎಂದು ಸಂಸದ ಶ್ರೀನಿವಾಸ್‌ಪ್ರಸಾದ್‌ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಬಳಿಗೆ ಮುಖ್ಯಮಂತ್ರಿಗಳು ಸರ್ವಪಕ್ಷ ನಿಯೋಗ ಕರೆದೊಯ್ಯಬೇಕಿತ್ತು. ಸಂಸದರನ್ನು ಕರೆದು ಸಭೆ ಮಾಡಬೇಕಿತ್ತು. ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಪ್ರಹ್ಲಾದ್‌ ಜೋಷಿ, ಸದಾನಂದಗೌಡ ಆಸಕ್ತಿ ವಹಿಸುತ್ತಿಲ್ಲ. ಕೇವಲ ಹಾರಿಕೆ ಉತ್ತರ ನೀಡುತ್ತಿದ್ದಾರೆ. ನಾಳೆ, ನಾಡಿದ್ದು ಅಂತ ದಿನಕ್ಕೊಂದು ಸಬೂಬು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.