ಉಡುಪಿ : ದೇಶದಲ್ಲಿ ದಲಿತರ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರು ಗುಂಪು ಹಿಂಸೆ, ಹತ್ಯೆಯನ್ನು ಖಂಡಿಸಿ ನಾಳೆ ಶುಕ್ರವಾರದಂದು ಉಡುಪಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಸಂಜೆ 04-00 ಘಂಟೆಗೆ ಸರಿಯಾಗಿ ನಗರದ ಸರ್ವೀಸ್ ಬಸ್ ನಿಲ್ದಾಣದಿಂದ ಅಜ್ಜರಕಾಡಿನ ಹುತಾತ್ಮ ಚೌಕದವರೆಗೆ  ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ನಂತರ ಸಾರ್ವಜನಿಕ ಸಮ್ಮುಖದಲ್ಲಿ ಪ್ರತಿಭಟನಾ ಸಭೆಯನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟರು ತಿಳಿಸಿದ್ದಾರೆ. ದಲಿತ ಹಿಂದುಳಿದ ಅಲ್ಪ ಸಂಖ್ಯಾತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಈ ಪ್ರತಿಭಟನಾ ಮೆರವಣಿಗೆ ಮತ್ತು ಸಭೆಯನ್ನು ಹಮ್ಮಿಕೊಂಡಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆ, ಕ್ರೈಸ್ತ ಸಂಘಟನೆಗಳ ಒಕ್ಕೂಟ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಸಿಐಟಿಯು, ಭಾರತ್ ಮುಕ್ತಿ ಮೋರ್ಚಾ ಇನ್ನೂ ಮುಂತಾದ ಸಹಭಾಗಿ  ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.